
ಹೊನ್ನಾವರ: ಕ್ರೀಡೆ ಮಾನವನ ಬದುಕಿನ ಉಸಿರಿನಷ್ಟೇ ಮಹತ್ವವಾದದ್ದು. ಕ್ರೀಡಾ ಮನೋಭಾವನೆಯಿಂದ ಸೋಲು- ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕೆಂದು ಪ.ಪಂ. ಉಪಾಧ್ಯಕ್ಷ ಸುರೇಶ ಹೊನ್ನಾವರ ಅಭಿಪ್ರಾಯಪಟ್ಟರು.
ನ್ಯೂ ಇಂಗ್ಲಿಷ್ ಸ್ಕೂಲ್ ಕ್ರೀಡಾಂಗಣದಲ್ಲಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕಾ ಆಡಳಿತ, ತಾಲೂಕಾ ಪಂಚಾಯತ್, ತಾಲೂಕಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹೊನ್ನಾವರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕ ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡೆಯು ನಾಯಕತ್ವದ ಗುಣದೊಂದಿಗೆ ಎಲ್ಲರನ್ನು ಒಂದಾಗಿಸುವ ಶಕ್ತಿ ಹೊಂದಿದೆ. ಉತ್ತಮ ಆರೋಗ್ಯದ ಜೊತೆಗೆ ವ್ಯಕ್ತಿಯ ವಿಕಸನ ಕ್ರೀಡಾಕೂಟದಿಂದ ಸಾಧ್ಯ ಎಂದರು.
ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಅಧ್ಯಕ್ಷ ಅಣ್ಣಪ್ಪ ನಾಯ್ಕ ಕ್ರೀಡಾ ಧ್ವಜಾರೋಹಣ ನೆರವೇರಿಸಿ, ದಸರಾ ಕ್ರೀಡಾಕೂಟವು ಪ್ರತಿಯೊಬ್ಬ ಕ್ರೀಡಾಪಟುವಿನಲ್ಲೂ ಹೊಸ ಚೈತನ್ಯ ತುಂಬಲಿ ಎಂದರು. ತಾಲೂಕಾ ದಂಡಾಧಿಕಾರಿ ಪ್ರವೀಣ್ ಕರಾಂಡೆ ವಿಜೇತ ಸ್ಪರ್ಧಾಳುಗಳಿಗೆ ಬಹುಮಾನ ವಿತರಿಸಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮುಖ್ಯಾಧ್ಯಾಪಕಿ ಕಮಲಾ ನಾಯ್ಕ ಮಾತನಾಡಿ, ದಸರಾ ಕ್ರೀಡಾಕೂಟವು ನಮ್ಮ ಕ್ರೀಡಾಂಗಣದಲ್ಲಿ ನಡೆಯುತ್ತಿರುವುದು ನಮ್ಮೆಲ್ಲರ ಭಾಗ್ಯ. ಕ್ರೀಡೆ ಮಾನವನ ಬದುಕಿನ ಅವಿಭಾಜ್ಯ ಅಂಗದAತೆ ಆಗಿದೆ. ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿದಾಗ ಮಾತ್ರ ಕ್ರೀಡಾಕೂಟದ ಸಾರ್ಥಕತೆ ಅಡಗಿದೆ ಎಂದರು. ಸಭಾ ಕಾರ್ಯಕ್ರಮದ ನಂತರ ಕ್ರೀಡಾಕೂಟ ಜರುಗಿದವು. ವಿಜೇತರಿಗೆ ಗಣ್ಯರು ಬಹುಮಾನ ವಿತರಿಸಿದರು. ಯುವಜನಸೇವಾ ಕ್ರೀಡಾಧಿಕಾರಿ ಸುಧೀಶ ನಾಯ್ಕ, ದೈಹಿಕ ಶಿಕ್ಷಕರು, ಶಿಕ್ಷಕ ಸಂಘದ ಪದಾಧಿಕಾರಿಗಳು ಇದ್ದರು.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ
More Stories
“ವಿಶ್ವ ಜನಸಂಖ್ಯಾ ದಿನಾಚರಣೆ” ಮತ್ತು “ವಿಶ್ವ ಸ್ಕಿಜೋಪ್ರೇನಿಯಾ ದಿನ” ದ ಜನಜಾಗೃತಿ ಕಾರ್ಯಕ್ರಮ
ಶ್ರೀ ಭಾರತಿ ಕವಲಕ್ಕಿ ಯ ವಿದ್ಯಾರ್ಥಿಯ ಸಾಧನೆ
ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಆರ್ ಎನ್ ಎಸ್ ಸಾಧನೆ