73ನೇ ಸಹಕಾರ ಸಪ್ತಾಹದ ಅಂಗವಾಗಿ ಶಿರಸಿಯಲ್ಲಿ ಪ್ರಶಸ್ತಿ ಪ್ರದಾನ; ಅಧ್ಯಕ್ಷ ರಾಘವ ಬಾಳೇರಿ ಹಾಗೂ ಪ್ರಧಾನ ವ್ಯವಸ್ಥಾಪಕರಿಂದ ಗೌರವ ಸ್ವೀಕಾರ
ಹೊನ್ನಾವರ (ಉತ್ತರ ಕನ್ನಡ): ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ-ಆಪರೇಟಿವ್ (ಕೆಡಿಸಿಸಿ) ಬ್ಯಾಂಕ್ ವತಿಯಿಂದ ನೀಡಲಾಗುವ 2025-26ನೇ ಸಾಲಿನ ಅತ್ಯುತ್ತಮ ಕಾರ್ಯಸಾಧನೆಗಾಗಿ ಉತ್ತರ ಕನ್ನಡ ಜಿಲ್ಲೆಯ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ಗಳ ಪೈಕಿ ‘ಉತ್ತಮ ಅರ್ಬನ್ ಬ್ಯಾಂಕ್ ಪ್ರಶಸ್ತಿ’ಗೆ ಹೊನ್ನಾವರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಭಾಜನವಾಗಿದೆ.

73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ನವೆಂಬರ್ 16, 2026 ರಂದು ಶಿರಸಿಯ ‘ಸುಂದರರಾವ್ ಪಂಡಿತ ಸ್ಮಾರಕ ಸಭಾಭವನ’ದಲ್ಲಿ ನಡೆದ ಸಮಾರಂಭದಲ್ಲಿ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವರಾಮ ಹೆಬ್ಬಾರ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಹೊನ್ನಾವರ ಅರ್ಬನ್ ಬ್ಯಾಂಕ್ ಅಧ್ಯಕ್ಷ ರಾಘವ ವಿಷ್ಣು ಬಾಳೇರಿ ಹಾಗೂ ಪ್ರಧಾನ ವ್ಯವಸ್ಥಾಪಕ ರಾಮಚಂದ್ರ ಸುಬ್ರಾಯ ಭಾಗ್ವತ ಅವರು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ಸ್ವೀಕರಿಸಿದರು.

ಬ್ಯಾಂಕ್ ಈ ಮಟ್ಟದ ಸಾಧನೆ ಮಾಡಲು ನಿರ್ದೇಶಕ ಮಂಡಳಿಯ ಸಮಯೋಚಿತ ನಿರ್ಧಾರಗಳು, ಸಿಬ್ಬಂದಿ ವರ್ಗದ ಪ್ರಾಮಾಣಿಕ ಪರಿಶ್ರಮ ಹಾಗೂ ಶೇರುದಾರರು ಮತ್ತು ಗ್ರಾಹಕರ ನಿರಂತರ ಸಹಕಾರವೇ ಪ್ರಮುಖ ಕಾರಣವಾಗಿದೆ ಎಂದು ಬ್ಯಾಂಕ್ ಅಧ್ಯಕ್ಷ ರಾಘವ ಬಾಳೇರಿ ಹರ್ಷ ವ್ಯಕ್ತಪಡಿಸಿದ್ದಾರೆ.

More Stories
ಮಾಜಿ ಸೈನಿಕ, ನಾಮಧಾರಿ ಸಮಾಜದ ಹಿರಿಯ ಮುಖಂಡ ವಾಮನ ನಾಯ್ಕ ಮಂಕಿ ನಿಧನ
ಹೊನ್ನಾವರ: ಕೋಟೆಬೈಲು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜೃಂಭಣೆಯ ‘ಮಕ್ಕಳ ಹಬ್ಬ’
ಹೊನ್ನಾವರ: ಅನುದಾನಿತ ಶಾಲಾ ನೌಕರರ ಹೋರಾಟಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಸಂಪೂರ್ಣ ಬೆಂಬಲ