ಭಟ್ಕಳ: ಮುರ್ಡೇಶ್ವರದಲ್ಲಿ ನಿಷೇಧಿತ ಎಲೆಕ್ಟ್ರಾನಿಕ್ ಸಿಗರೇಟ್ ಹಾಗೂ ನಿಕೋಟಿನ್ ಲಿಕ್ವಿಡ್ ಮಾರಾಟ ಮಾಡುತ್ತಿದ್ದ ವ್ಯಾಪಾರಿಯೊಬ್ಬನನ್ನು ಪೊಲೀಸರು ಬೇಟೆ ಬಿದ್ದು ಬಂಧಿಸಿರುವ ಘಟನೆ ಸೋಮವಾರ ರಾತ್ರಿ ಬೆಳಕಿಗೆ ಬಂದಿದೆ.
ಬAಧಿತನನ್ನು ಮಸೂದ್ ಅಹಮದ್ (ಮೂಗ್ದಮ್ ಕಾಲೋನಿ ನಿವಾಸಿ) ಎಂದು ಗುರುತಿಸಲಾಗಿದೆ. ಆರೋಪಿ ತೆರ್ನಮಕ್ಕಿ ಚರ್ಚ್ ಹತ್ತಿರ ಇ ಸಿಗರೇಟ್ ಹಾಗೂ ಅದರ ಪರಿಕರಗಳನ್ನು ಮಾರಾಟ ಮಾಡುತ್ತಿದ್ದನೆಂಬ ಖಚಿತ ಮಾಹಿತಿ ದೊರಕುತ್ತಿದ್ದಂತೆಯೇ ಪಿಎಸೈ ಹಣಮಂತ ಬಿರಾದಾರ ನೇತೃತ್ವದ ತಂಡ ದಾಳಿ ನಡೆಸಿತು.
ಕಾರ್ಯಾಚರಣೆಯಲ್ಲಿ ಪೊಲೀಸರು ಆರೋಪಿಯಿಂದ ಇ ಸಿಗರೇಟ್‌ಗಳು ಹಾಗೂ ಇ-ಸಿಗರೇಟ್‌ಗಳಿಗೆ ತುಂಬುವ ಐದು ನಿಕೋಟಿನ್ ಲಿಕ್ವಿಡ್ ರಿಫಿಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿದಿದೆ.

More Stories
ಭಟ್ಕಳ ತಲಾಂದ ಶಾಲೆಯಲ್ಲಿ ಉತ್ಸಾಹಭರಿತ ಪ್ರತಿಭಾ ಕಾರಂಜಿ, ಪುರವರ್ಗ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಗೆ ಸಡಗರ
ಭಟ್ಕಳದಲ್ಲಿ ಶ್ರೀರಾಮ ದಿಗ್ವಿಜಯ ರಥಯಾತ್ರೆಗೆ ಅದ್ದೂರಿ ಸ್ವಾಗತ
ವ್ಯವಹಾರಿಕ ಜ್ಞಾನಕ್ಕೆ ಪಾಠ ಕಲಿಸಿದ ಮಕ್ಕಳ ಸಂತೆ